ನಳಿನ ಕುಮಾರ್ ಆರೆಸ್ಸೆಸ್ ರಬ್ಬರ್ ಸ್ಟ್ಯಾಂಪ್. ರಾಜ್ಯ ಬಿಜೆಪಿ ಅಧ್ಯಕ್ಷರ ವಿರುದ್ಧ ತವರಿನಲ್ಲೇ ಅಪಸ್ವರ.

ಕರಾವಳಿ ಕರ್ನಾಟಕ ವರದಿ

ಮಂಗಳೂರು
: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಿರುವುದರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅಸಮಾಧಾನ ಭುಗಿಲೆದ್ದಿದೆ. ಹಲವು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿ ಈ ಕುರಿತು ಅಸಮಾಧಾನ ಹೊರಹಾಕಿದ್ದಾರೆ.

ಮೂರು ಬಾರಿ ಸಂಸದರಾಗಿಯೂ ಜಿಲ್ಲೆಗೆ ಏನನ್ನೂ ಮಾಡದ ನಳಿನ್ ಕೇವಲ ಆರೆಸ್ಸೆಸ್ ಅಣತಿಯಂತೆ ನಡೆದುಕೊಳ್ಳುವಲ್ಲಿ ಸಮರ್ಥರೇ ವಿನಃ ಜನರಿಗೆ ಅಥವಾ ಬಿಜೆಪಿಗೆ ಅವರ ಈ ಹುದ್ದೆಯಿಂದ ಏನೂ ಪ್ರಯೋಜನವಿಲ್ಲ ಎಂದು ಕಾರ್ಯಕರ್ತರು ದೂರಿದ್ದಾರೆ.

ಅದಕ್ಷ ನಳಿನ್ ಕೇವಲ ನರೇಂದ್ರ ಮೋದಿ ಹೆಸರಲ್ಲಿ ಮತ್ತೆ ಗೆದ್ದು ಬಂದಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿ ಆರೆಸ್ಸೆಸ್‌ನ ರಬ್ಬರ್ ಸ್ಟ್ಯಾಂಪ್ ಆಗಿ ನಳಿನ್ ಕೆಲಸ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ..

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಆರೆಸ್ಸೆಸ್‍ನ ಯೆಸ್ ಮ್ಯಾನ್ ಆಗಿರುವ ಕಟೀಲ್ ಅವರನ್ನು ಬಳಸಿಕೊಂಡು ಜಿಲ್ಲೆಯಲ್ಲಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಈ ತಂತ್ರ ಹೂಡಿದ್ದಾರೆ ಎಂದು ಹಲವಾರು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ