ಕರ್ನಾಟಕಕ್ಕೆ 3 ಉಪ-ಮುಖ್ಯಮಂತ್ರಿಗಳ ನೇಮಕ: ಬೊಮ್ಮಾಯಿಗೆ ಗೃಹ ಖಾತೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಕರ್ನಾಟಕದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದ್ದು ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ ಮತ್ತು ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡಲಾಗಿದೆ.

ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ 17 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.  ಗೃಹ ಖಾತೆ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಪಾಲಾಗಿದೆ. 

2018ರ ಚುನಾವಣೆಯಲ್ಲಿ ಸೋತ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು, ಈಗ ಉಪಮುಖ್ಯಮಂತ್ರಿ ಹುದ್ದೆಯೂ ಸಿಕ್ಕಿದೆ.

ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದ ಶಾಸಕರಾಗಿದ್ದು ದಲಿತ ಸಮುದಾಯಕ್ಕೆ ಸೇರಿದವರು. 2004ರಿಂದ ಸತತವಾಗಿ ಮುಧೋಳ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ.

ಡಾ. ಅಶ್ವತ್ಥ್ ನಾರಾಯಣ ಮಲ್ಲೇಶ್ವರಂ ಕ್ಷೇತ್ರದ ಶಾಸಕರು. ಒಕ್ಕಲಿಗ ಸಮುದಾಯಕ್ಕೆ ಸೇರಿದ ಇವರು ಎಂಬಿಬಿಎಸ್ ಪದವೀಧರರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಸತತವಾಗಿ ಜಯಗಳಿಸಿದ್ದಾರೆ.

ಲಕ್ಷಣ ಸಂಗಪ್ಪ ಸವದಿ 2018ರ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅವರಿಗೆ ಈಗ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.

ಉಪ ಮುಖ್ಯಮಂತ್ರಿ ಹುದ್ದೆ ಜಗದೀಶ್ ಶೆಟ್ಟರ್, ಆರ್. ಅಶೋಕ, ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಹೆಸರುಗಳು ಉಪ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತು.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ