ಪುತ್ತೂರು: ಗಣೇಶೋತ್ಸವದ ವೇಳೆ ಹಿಂಜಾವೇ ಕಾರ್ಯಕರ್ತನ ಹತ್ಯೆ

ಕರಾವಳಿ ಕರ್ನಾಟಕ ವರದಿ

ಪುತ್ತೂರು:
ಸಂಪ್ಯ ಪೊಲೀಸ್ ಠಾಣೆಯ ಎದುರಿನಲ್ಲೆ ನಡೆಯುತ್ತಿದ್ದ ಗಣೇಶೋತ್ಸವದ ವೇಳೆ ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಿವೃತ್ತ ಅಧಿಕಾರಿ ಸಂಪ್ಯ ಸಮೀಪದ ಮೇರ್ಲ ರಮೇಶ್ ಸುವರ್ಣ ಅವರ ಪುತ್ರ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 3ರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ  ವೇಳೆ ನುಗ್ಗಿದ ದುಷ್ಕರ್ಮಿಗಳು, ಕಾರ್ತಿಕ್ ಎದೆಗೆ ಚೂರಿ ಹಾಕಿದ್ದಾರೆ. ತೀವ್ರ ಗಾಯಗೊಂಡ ಕಾರ್ತಿಕ್ ಅವರನ್ನುತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಮೃತರಾಗಿದ್ದರು.

ಹಳೆ ವೈಷಮ್ಯವೇ  ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ