ಹಿರಿಯ ಸಾಹಿತಿ ಸಾ.ಶಿ. ಮರುಳಯ್ಯ ಅಸ್ತಂಗತ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾ.ಶಿ. ಮರುಳಯ್ಯ (85) ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1931ರಲ್ಲಿ ಜನಿಸಿದ ಸಾ.ಶಿ. ಮರುಳಯ್ಯ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಸಲು ಗ್ರಾಮದವರು. ಹಲವೆಡೆ ಬೋಧಕರಾಗಿ ಸೇವೆ ಸಲ್ಲಿಸಿದ್ದರು. 1995ರಿಂದ 1998ರವರೆಗೆ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಸಾ.ಶಿ.ಮ ರಾಜ್ಯಭಾಷಾ ಆಯೋಗದ ಸದಸ್ಯರಾಗಿಯೂ  ಸೇವೆ ಸಲ್ಲಿಸಿದ್ದರು.

ಕೃತಿಗಳು:
ಶಿವತಾಂಡವ, ಕೆಂಗನಕಲ್ಲು, ರಾಸಲೀಲೆ, ರೂಪಸಿ (ಕಾವ್ಯ)
ಪುರುಷಸಿಂಹ, ಹೇಮಕೂಟ, ಸಾಮರಸ್ಯದ ಶಿಲ್ಪ (ಕಾದಂಬರಿ)
ವಿಜಯವಾತಾಪಿ, ಎರಡು ನಾಟಕಗಳು, ಮರೀಬೇಡಿ (ನಾಟಕ)
ನೆಲದ ಸೊಗಡು (ಕಥಾಸಂಕಲನ)
ವಚನ ವೈಭವ, ಸ್ಪಂದನ, ಅವಲೋಕನ (ಸಂಶೋಧನಾ ಕೃತಿಗಳು)
ಮಾಸ್ತಿಯವರ ಕಾವ್ಯಸಮೀಕ್ಷೆ, ಅಭಿವ್ಯಕ್ತ, ಅನುಶೀಲನ (ವಿಮರ್ಶೆ)

ಪ್ರಶಸ್ತಿಗಳು:
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ದೇವರಾಜ ಬಹದ್ದೂರ್ ಪ್ರಶಸ್ತಿ, ಎಚ್.ನರಸಿಂಹಯ್ಯ ಪ್ರಶಸ್ತಿ 

ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ
ಸಾ.ಶಿ.ಮ ಇಚ್ಛೆಯಂತೆ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಜೆ.ಎಸ್.ಎಸ್‌ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Related Tags: Sa Shi Maruliah No More, Passes Away, Kannada Writer
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ