ಪೊಲೀಸರಿಂದ ಆರೋಪಿಗಳ ಚಿತ್ರ ಬಿಡುಗಡೆ

ಕರಾವಳಿ ಕರ್ನಾಟಕ ವರದಿ
ಬೆಂಗಳೂರು: ನಗರದ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಗುರುವಾರ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಈ ಸಂಬಂಧ ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು, ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಅಯ್ಯಪ್ಪ ಮತ್ತು ಲೆನೋ ಎಂದು ಗುರುತಿಸಲಾಗಿದೆ. ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಡೆಲಿವರಿ ಬಾಯ್ ಹಾಗೂ ಐಟಿಐ ವಿದ್ಯಾರ್ಥಿಯಾಗಿರುವ ಅಯ್ಯಪ್ಪ ಎಂದು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಅಯ್ಯಪ್ಪ ಲಿಂಗರಾಜಪುರಂನ ನಿವಾಸಿಯಾಗಿದ್ದು,  ಹಲವು ವರ್ಷಗಳಿಂದ ಕೆಲಸ ಇಲ್ಲದ ಮನೆಯಲ್ಲಿ ಕಾಲ ಕಳೆಯುತ್ತಿದ್ದ. ಆದರೆ ಇತ್ತೀಚಿಗಷ್ಟೇ ಡೆಲಿವರಿ ಬಾಯ್ ಕೆಲಸಕ್ಕೆ ಸೇರಿದ್ದ. ಆರೋಪಿಗಳು ಕಳೆದ ಕೆಲವ ದಿನಗಳಿಂದ ಯುವತಿಯ ಚಲನವಲನಗಳನ್ನು ಗಮನಿಸುತ್ತಿದ್ದು, ಡಿಸೆಂಬರ್ 31ರಂದು ಮಧ್ಯರಾತ್ರಿ ಕೃತ್ಯ ಎಸಗಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆ ತಂಡ ನಾಲ್ವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನು ಇಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸೂದ್ ತಿಳಿಸಿದರು. ಅಲ್ಲದೆ ಬಂಧಿತ ನಾಲ್ವರು ಆನ್‌ಲೈನ್‌ ಫುಡ್‌ ಡೆಲಿವರಿ ಬಾಯ್‌ಗಳಾಗಿ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಬಾಣಸವಾಡಿ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆ. ಆದರೆ ಯುವಕರ ವಿರುದ್ಧ ದೂರು ನೀಡಲು ಯುವತಿ ಹಿಂದೇಟು ಹಾಕಿದ್ದಾರೆ ಎಂದು  ತಿಳಿದುಬಂದಿದೆ.

Related Tags: Bangalore Molestation Case, Kammanahalli, New Year Party, Leno, Ayyappa, CC TV, Praveen Sood
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ