ಸಾಕ್ಷಿ ಮಹಾರಾಜ್ ವಿರುದ್ಧ ಎಫ್ಐಆರ್

ಕರಾವಳಿ ಕರ್ನಾಟಕ ವರದಿ
ನವದೆಹಲಿ:
ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ವಿರುದ್ಧ ಮೀರತ್ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.

ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಬೇಕು ಎನ್ನುವವರೇ ಕಾರಣ ಎಂದು ಮುಸ್ಲಿಮರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಾಕ್ಷಿ ಮಹಾರಾಜ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆತಂದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಸಾಕ್ಷಿ ಮಹಾರಾಜ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶ ಚುನಾವಣಾ ಆಯೋಗ, ಈ ಸಂಬಂಧ ಮೀರತ್ ಜಿಲ್ಲಾ ಆಡಳಿತಕ್ಕೆ ನೋಟಿಸ್ ನೀಡಿದ್ದು, ಬಿಜೆಪಿ ನಾಯಕನ ಹೇಳಿಕೆ ಬಗ್ಗೆ ವರದಿ ನೀಡುವಂತೆ ಸೂಚಿಸಿದೆ.

ದಿನದಿಂದ ದಿನಕ್ಕೆ ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಮಹಿಳೆಯರು ಮಕ್ಕಳನ್ನು ಹೆರುವ ಯಂತ್ರವಲ್ಲ. ನಾಲ್ವರು ಪತ್ನಿಯರು, 40 ಮಕ್ಕಳು ಹಾಗೂ ಮೂರು ವಿಚ್ಛೇದನ ಪಡೆದವರನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದರು.

Related Tags: Sakshi Maharaj, Uttar Pradesh Elections, Muslim Population, FIR
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ