ಬಜೆಟ್: ಕೇಂದ್ರದ ಪ್ರತಿಕ್ರಿಯೆ ಕೇಳಿದ ಆಯೋಗ

ಕರಾವಳಿ ಕರ್ನಾಟಕ ವರದಿ
ನವದೆಹಲಿ:
ಪಂಚರಾಜ್ಯಗಳ ಚುನಾವಣೆಗೂ ಮುನ್ನ ಬಜೆಟ್ ಮಂಡನೆ ಮಾಡುವುದನ್ನು ವಿರೋಧಿಸಿ ಪ್ರತಿಪಕ್ಷಗಳು ನೀಡಿದ್ದ ದೂರಿಗೆ ಸ್ಪಂದಿಸಿರುವ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಚುನಾವಣೆ ನಡೆಯುವುದಕ್ಕೂ ಮುನ್ನ ಬಜೆಟ್ ಮಂಡನೆ ಮಾಡುವುದರ ಕುರಿತು ಚುನಾವಣಾ ಆಯೋಗದ ಮುಖ್ಯ ಆಯುಕ್ತ ನಝೀಂ ಜೈದಿ, ಕ್ಯಾಬಿನೆಟ್ ಕಾರ್ಯದರ್ಶಿ ಪಿಕೆ ಸಿನ್ಹಾ ಅವರಿಗೆ ಪತ್ರ ಬರೆದಿದ್ದು, ಪಿಕೆ ಸಿನ್ಹಾ ಅವರು ಸಂಸದೀಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಚುನವಣಾ ಆಯೋಗಕ್ಕೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ತಿಳಿಸುವ ಸಾಧ್ಯತೆಗಳಿವೆ.

ಇತ್ತೀಚಿನ ವರದಿಗಳ ಪ್ರಕಾರ ಕೇಂದ್ರ ಸರ್ಕಾರ ಫೆ.1 ಕ್ಕೆ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದೆ.  ಪಂಜಾಬ್, ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್, ಟಿಎಂಸಿ, ಬಿಎಸ್‌ಪಿ, ಎಸ್‌ಪಿ ಸೇರಿದಂತೆ ವಿರೋಧಪಕ್ಷಗಳು ಚುನಾವಣೆ ಆಸುಪಾಸಿನಲ್ಲೇ ಬಜೆಟ್ ಮಂಡನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾ.8 ರ ವರೆಗೆ ಬಜೆಟ್ ನ್ನು ಮುಂದೂಡುವಂತೆ ಮನವಿ ಮಾಡಿವೆ.

Related Tags: Election Commission, Budget, Five States Election , NDA Government
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ