ಲೋಕಾಯುಕ್ತಕ್ಕೆ ವಿಶ್ವನಾಥ ಶೆಟ್ಟಿ ಹೆಸರು ಶಿಫಾರಸು

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರ ಹೆಸರು ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸೋಮವಾರ ನಡೆದ ಉನ್ನತಾಧಿಕಾರ ಆಯ್ಕೆ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ವಿಧಾನಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ವಿಧಾನಮಂಡಲದ ಉಭಯ ಸದನಗಳ  ವಿರೋಧ ಪಕ್ಷದ ನಾಯಕರಾದ ಜಗದೀಶ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ ಹಾಜರಿದ್ದು ವಿಶ್ವನಾಥ ಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಈ ಕುರಿತು ರಾಜ್ಯಪಾಲರಿಗೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಪ್ರಸ್ತಾವನೆ ಕಳುಹಿಸಲಿದೆ.

ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಭಾಸ್ಕರ ರಾವ್‌ ಅವರು ಭ್ರಷ್ಟಾಚಾರ ಆರೋಪದಲ್ಲಿ ರಾಜೀನಾಮೆ ನೀಡಿದ ಬಳಿಕ ಕಳೆದ 13 ತಿಂಗಳಿಂದ ಈ ಹುದ್ದೆ ಖಾಲಿ ಇದೆ.

ಈ ನಡುವೆ ಪಿ. ವಿಶ್ವನಾಥ ಶೆಟ್ಟಿ  ಅವರ ವಿರುದ್ಧವೂ ಸುಳ್ಳು ಪ್ರಮಾಣ ಪತ್ರ ನೀಡಿ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದ ಆರೋಪ ಕೇಳಿಬಂದಿದೆ.

ನಾನು ಸುಳ್ಳು ಪ್ರಮಾಣಪತ್ರ ಕೊಟ್ಟು ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿಲ್ಲ. ನಿವೇಶನಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಆರ್‌.ಟಿ. ನಗರದಲ್ಲಿ ಮನೆ ಹೊಂದಿರುವ ಮಾಹಿತಿ ಬಹಿರಂಗಪಡಿಸಿದ್ದೇನೆ’ ಎಂದು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

Related Tags: Lokayukta, Vishwanath Shetty, Karnataka
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ