ಕಾರಣವಿಲ್ಲದೇ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ
ಸ್ಕ್ಯಾನಿಂಗ್‌ ಕೇಂದ್ರಗಳ ಕಾರ್ಯ ವೈಖರಿ ಕುರಿತು ಹದಿನೈದು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಪ್ರಸೂತಿ ತಜ್ಞರು ಗರ್ಭಿಣಿಗೆ ಸ್ಕ್ಯಾನ್‌ಗೆ ಸೂಚಿಸುವಾಗ ನಿರ್ದಿಷ್ಟ ಕಾರಣಗಳನ್ನು ನೀಡದೆ, ಸ್ಕ್ಯಾನಿಂಗ್‌ ಕೇಂದ್ರಗಳು ಕಾರಣ ತಿಳಿಯದೇ  ಸ್ಕ್ಯಾನ್‌ ಮಾಡಿದರೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಸ್ಕ್ಯಾನಿಂಗ್‌ ಕೇಂದ್ರಗಳ ಕಾರ್ಯ ವೈಖರಿ ಕುರಿತು ಹದಿನೈದು ದಿನಗಳಲ್ಲಿ ವರದಿ ಸಲ್ಲಿಸುವಂತೆ ಆಯಾ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಅಧಿಕಾರಿಗಳು ವರದಿ ಸಲ್ಲಿಸದಿದ್ದರೆ, ಅಮಾನತು ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.

ವಿಕಾಸಸೌಧದಲ್ಲಿ ನಡೆದ ಗರ್ಭಧಾರಣೆ ಮತ್ತು ಪ್ರಸವಪೂರ್ವ ಪತ್ತೆ ತಂತ್ರವಿಧಾನಗಳ ಅಧಿನಿಯಮದ ರಾಜ್ಯ ಮೇಲ್ವಿಚಾರಣಾ ಮಂಡಳಿ ಸಭೆಯ ನಂತರ ಸುದ್ದಿಗಾರರಿಗೆ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಈ ಮಾಹಿತಿ ನೀಡಿದರು.

ಸ್ಕ್ಯಾನಿಂಗ್‌ ಕೇಂದ್ರಗಳಲ್ಲಿ ಭ್ರೂಣ ಲಿಂಗಪತ್ತೆಯಂತಹ ನಿಯಮಬಾಹಿರ ಚಟುವಟಿಕೆಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಭ್ರೂಣಲಿಂಗ ಪತ್ತೆಯಲ್ಲಿ ತೊಡಗಿರುವ ಸಮರ್ಪಕ ದಾಖಲೆ ಪರವಾನಗಿ ಇಲ್ಲದಿರುವ ಮತ್ತು ಅಪೂರ್ಣ ವರದಿಗಳನ್ನು ನೀಡುತ್ತಿರುವ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಪತ್ತೆಹಚ್ಚಿ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಇದುವರೆಗೆ ಶಿಕ್ಷೆಯಾಗಿರಲಿಲ್ಲ
2002ರಿಂದ ನಿಯಮಗಳ ಉಲ್ಲಂಘನೆ ಮಾಡಿದ್ದ 72 ಸ್ಕ್ಯಾನಿಂಗ್‌ ಕೇಂದ್ರಗಳು ರಾಜ್ಯದಲ್ಲಿ ಪತ್ತೆಯಾಗಿವೆ.  ಕಳೆದ ವರ್ಷದಲ್ಲಿ ಇಂತಹ 20 ಪ್ರಕರಣಗಳು ದಾಖಲಾಗಿದ್ದು, ಸ್ಕ್ಯಾನಿಂಗ್‌ ಯಂತ್ರಗಳನ್ನು ಜಪ್ತಿ ಮಾಡಲಾಗಿದೆ.  ಯಾವುದೇ ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

Related Tags: Scanning, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಸಚಿವ ರಮೇಶ್ ಕುಮಾರ್, ಸ್ಕ್ಯಾನಿಂಗ್‌ ಕೇಂದ್ರ, ಕನ್ನಡ ಸುದ್ದಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ, ಇತ್ತೀಚಿನ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ