ಫ್ಲೆಕ್ಸ್ ತೆರವು: ಚುನಾವಣಾ ಆಯೋಗ ಆದೇಶ

ಕರಾವಳಿ ಕರ್ನಾಟಕ ವರದಿ
ನವದೆಹಲಿ:
ಮುಂದಿನ ತಿಂಗಳು ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆ  ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ರಾಜಕೀಯ ನಾಯಕರ ಭಾವಚಿತ್ರವಿರುವ ಜಾಹಿರಾತುಗಳನ್ನು ತೆರವುಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಫೆಬ್ರುವರಿ ತಿಂಗಳಲ್ಲಿ ಚುನಾವಣೆ ನಡೆಯುವುದರಿಂದ ಈ ಐದು ರಾಜ್ಯಗಳಲ್ಲಿ ಹೊರ್ಡಿಂಗ್‌ಗಳು, ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಹಾಗೂ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಸೂಚಿಸಿದೆ.

ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಪ್ರಧಾನ ಮಂತ್ರಿಯವರ ಹೊರ್ಡಿಂಗ್‌ಗಳು ರಾರಾಜಿಸುತ್ತಿದ್ದು ಅವುಗಳನ್ನು ತೆರವುಗೊಳಿಸುವಂತೆ ಸೂಚಿಸಲು ಕಾಂಗ್ರೆಸ್ ಪಕ್ಷ ನಿನ್ನೆ ಚುನಾವಣಾ  ಆಯೋಗಕ್ಕೆ ಮನವಿ ಮಾಡಿತ್ತು.

Related Tags: Election flex, Narendra Modi, Political Leader, Election Commission, Five State Election, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ