ಈಶ್ವರಪ್ಪ ಶಿಷ್ಯನಿಗೆ ಬಿಜೆಪಿಯಿಂದ ಗೇಟ್‌ಪಾಸ್
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಮೇಲ್ಮನೆ ವಿಪಕ್ಷ ನಾಯಕ ಈಶ್ವರಪ್ಪ ನಡುವಿನ ಜಟಾಪಟಿ ತೀವ್ರಗೊಂಡಿದೆ.

ಕರಾವಳಿ ಕರ್ನಾಟಕ ವರದಿ
ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಮೇಲ್ಮನೆ ವಿಪಕ್ಷ ನಾಯಕ ಈಶ್ವರಪ್ಪ ನಡುವಿನ ಜಟಾಪಟಿ ಮುಂದುವರಿದಿದ್ದು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಮುಖಂಡ ಬಿಬಿಎಂಪಿ ಮಾಜಿ ಮೇಯರ್ ವೆಂಕಟೇಶ್ ಮೂರ್ತಿಯವರನ್ನು ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ವೆಂಕಟೇಶ್ ಮೂರ್ತಿ ಅಮಾನತುಗೊಳಿಸುವ ಮೂಲಕ ಈಶ್ವರಪ್ಪ ಬಣಕ್ಕೆ ಬಿಎಸ್ ವೈ ಬಿಸಿ ಮುಟ್ಟಿಸಿದ್ದಾರೆ.

ವೆಂಕಟೇಶ್ ಮೂರ್ತಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಪಕ್ಷದಿಂದ ಅಮಾನತುಗೊಳಿಸಿ ಬೆಂಗಳೂರು ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ ಅವರು ಆದೇಶ ಹೊರಡಿಸಿದ್ದಾರೆ.

ಕುರುಬರ ಸಂಘದ ಹಿರಿಯ ಮುಖಂಡರಾದ ವೆಂಕಟೇಶ್ ಮೂರು ಬಾರಿ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಮೇಯರ್ ಕೂಡ ಆಗಿದ್ದ ಪ್ರಭಾವಿ ಮುಖಂಡರು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ವೆಂಕಟೇಶ್‌ ಮೂರ್ತಿ.

ಇದನ್ನೂ ಓದಿ:
►►ಬಿಎಸ್‌ವೈ ಸಿಎಂ ಮಾಡುವ ಇರಾದೆ ಬ್ರಿಗೇಡ್‌ಗೆ ಇಲ್ಲ. ಯಡಿಯೂರಪ್ಪಗೆ ಮತ್ತೆ ಈಶ್ವರಪ್ಪ ಟಾಂಗ್
http://bit.ly/2i8Fr6v

Related Tags: Yeddyurappa vs Eshwarappa, Kannada News, Karnataka News, Coastal Karnataka News, Karavali News, Karavali Karnataka, Latest Kannada News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ