ಸೂಲಿಬೆಲೆ 'ಗಲಾಟೆ': ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ
ಶೃಂಗೇರಿ ಜೆಸಿಬಿಎಂ ಕಾಲೇಜಿನ ಬಿಕಾಂ ವಿದ್ಯಾರ್ಥಿ, ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆಗೈದ ಕಳವಳಕಾರಿ ವಿದ್ಯಮಾನ.

ಕರಾವಳಿ ಕರ್ನಾಟಕ ವರದಿ
ಚಿಕ್ಕಮಗಳೂರು:
ಜೆಸಿಬಿಎಂ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್(21) ಎಂಬಾತ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಗಲಾಟೆಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಕಳವಳಕಾರಿ ಘಟನೆ ವರದಿಯಾಗಿದೆ.

ಪೊಲೀಸ್ ದೂರು ದಾಖಲಾಗಿದ್ದರಿಂದ ಈ ಪ್ರಕರಣದಿಂದ  'ನನ್ನ ಲೈಫೇ ಹಾಳಾಯ್ತು' ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಜೆಸಿಬಿಎಂ ಕಾಲೇಜು ವಿದ್ಯಾರ್ಥಿಗಳು ಅಭಿಷೇಕ್ ಸಾವಿನ ಹಿನ್ನೆಲೆಯಲ್ಲಿ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟಿಸುತ್ತಿದ್ದಾರೆ. ಎಸ್ಪಿ ಬರಬೇಕೆಂದು ಪಟ್ಟುಹಿಡಿದಿದ್ದಾರೆ.

ಶೃಂಗೇರಿಯಲ್ಲಿ ಜ. 7ರಂದು ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯನ್ನು ಆಹ್ವಾನಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು. ಸೂಲಿಬೆಲೆ ಬರುವುದಕ್ಕೆ ಎನ್.ಎಸ್.ಯು.ಐ ಕಾರ್ಯಕರ್ತರ ಪ್ರಬಲ ವಿರೋಧವಿತ್ತು. ಎನ್.ಎಸ್.ಯು.ಐ ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿತ್ತು.

ಇದೇ ವಿಚಾರದಲ್ಲಿ ಎನ್ಎಸ್ಯುಐ ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಅಭಿಷೇಕ್ ಸೇರಿದಂತೆ ನಾಲ್ಕು ಮಂದಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related Tags: Kannada News, Karnataka News, Coastal Karnataka News, Karavali News, Karavali Karnataka, Latest Kannada News,ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ, ಶೃಂಗೇರಿ ಜೆಸಿಬಿಎಂ ಕಾಲೇಜು, ಅಭಿಷೇಕ್ ಆತ್ಮಹತ್ಯೆ, ಕನ್ನಡ ಸುದ್ದಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ, ಇತ್ತೀಚಿನ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ